ನಾಯಕತ್ವ ಬದಲಾವಣೆ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ? ಶಿವಮೊಗ್ಗ,ಮೇ,28,2021(..):ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರದ ನಾಯಕರು ನಾಯಕತ್ವ ಬದಲಾಯಿಸಲ್ಲ ಎಂದಿದ್ದಾರೆ. ಈ ಪರಿಸ್ಥಿತಿಯಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ಧಾರೆ. ಹೀಗಾಗಿ ಸಿಎಂ ಬದಲಾವಣೆ ಇಲ್ಲ ಎಂದು ಎಲ್ಲಾ ಬಿಜೆಪಿ ಶಾಸಕರು ಬಂಡೆ ಕಲ್ಲಿನಂತೆ ದೃಢ ನಿಲುವನ್ನ ತಾಳಿದ್ದೇವೆ. ಅದ್ದರಿಂದ ಸಿಎಂ ಬದಲಾಯಿಸುವ ಪ್ರಶ್ನೆಯೇ ಉದ್ಬವಿಸಲ್ಲ ಎಂದರು. : –- -- -