ಸಂಪೂರ್ಣ ಚೇತರಿಕೆ: ವರ್ಕ್ಔಟ್ ಆರಂಭಿಸಿದ ಕೆ.ಎಲ್.ರಾಹುಲ್ ಬೆಂಗಳೂರು, ಮೇ 27, 2021 (..):ಕೆಎಲ್ ರಾಹುಲ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ನಂತರ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ವ್ಯಾಯಾಮ ಮಾಡುತ್ತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ರಾಹುಲ್ ಮುಂದಿನ ಸರಣಿಗಳಿಗೆ ಸಿದ್ಧರಾಗುವ ಸೂಚನೆ ನೀಡಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ರಾಹುಲ್ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ . ಜತೆಗೆ ಸೆಪ್ಟೆಂಬರ್’ನಲ್ಲಿ ಪುನಾರಂಭಗೊಳ್ಳುವ ಐಪಿಎಲ್ ಪಂದ್ಯಾವಳಿಯಲ್ಲಿ ಪಂಜಾಬ್ ತಂಡವನ್ನು ರಾಹುಲ್ ಮತ್ತೊಮ್ಮೆ ಮುನ್ನಡೆಸಲಿದ್ದಾರೆ.