ಕೆ.ಎಲ್. ರಾಹುಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್! ಬೆಂಗಳೂರು, ಮೇ 25, 2021 (..):ಅಪೆಂಡಿಸೈಟಿಸ್‌ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾದ ಕೆ.ಎಲ್‌. ರಾಹುಲ್‌ ಇಂಗ್ಲೆಂಡ್‌ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಐಪಿಎಲ್ ಪಂದ್ಯದ ವೇಳೆ ಪಂಜಾಬ್ ತಂಡದ ನಾಯಕನಾಗಿದ್ದ ರಾಹುಲ್ ಗೆ ದಿಢೀರ್ ಆಗಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೆ.ಎಲ್‌. ರಾಹುಲ್‌ ಭಾರತ ತಂಡದ ಬ್ಯಾಕ್‌ ಅಪ್‌ ಓಪನರ್‌ ಆಗಿ ಆಯ್ಕೆಗೊಂಡಿದ್ದರು. ರಾಹುಲ್ ಅನುಪಸ್ಥಿತಿಯಲ್ಲಿ ಪಂಜಾಬ್ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಿದ್ದರು. ಇಂಗ್ಲೆಂಡ್ ನಲ್ಲಿ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿ ಆಡಲಿದೆ.