ರೆಮ್ ಡೆಸಿವಿರ್ ಹಂಚಿಕೆ ಅಕ್ರಮ ತಡೆಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆ: ಡಾ. ಸುಧಾಕರ್ ಮೈಸೂರು,ಮೇ23, 2021 (..):ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಈ ಸಂಬಂಧ ಮಾಹಿತಿ ಜತೆಗೆ ಒಂದು ಲಿಂಕ್ ಹಂಚಿಕೊಂಡಿದ್ದಾರೆ. ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು ಕಳುಹಿಸಲಾಗುತ್ತದೆ. ಸಾರ್ವಜನಿಕರು ಈ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಸುಧಾಕರ್ ತಿಳಿಸಿದ್ದಾರೆ. ಇಲ್ಲಿದೆ ನೋಡಿ ಆ ಲಿಂಕ್ ://.../service2