ಬಂಧನ ಭೀತಿಯಿಂದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ: ನಾಳೆಗೆ ಮುಂದೂಡಿಕೆ. ಬೆಂಗಳೂರು,ಮೇ,27,2024 (..):ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ ಐಟಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದು ಈ ಅರ್ಜಿ ವಿಚಾರಣೆಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಾಳೆಗೆ ಮುಂದೂಡಿದೆ. ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲರು, ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಲಾಗಿದೆ.ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆ ಎಂದು ಎಸ್‌ ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇರುವುದರಿಂದ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದರು. ಇನ್ನು ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿ ಪೊಲೀಸರಿಗೆ ಕೋರ್ಟ್ ಸೂಚಿಸಿ ಜಾಮೀನು ಅರ್ಜಿ ವಿಚಾರಣೆಯನ್ನ ನಾಳೆಗೆ ಮುಂದೂಡಿದೆ. : , , ,