ಮಹಾರಾಷ್ಟ್ರದ ಕೊಲ್ಹಾಪುರದಲ್ಲೂ ಇಂದು ಭೂ ಕಂಪನ ಮಹಾರಾಷ್ಟ್ರ,ಮೇ23, 2021 (..):ಮಹಾರಾಷ್ಟ್ರದ ಕೊಲ್ಹಾಪುರದಲ್ಲೂ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದೆ. ಈ ಸಂಬಂಧ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 9.16 ಕ್ಕೆ ಕೊಲ್ಹಾಪುರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿದೆ. ಆದರೆ ಯಾವುದೇ ಸಾವು-ನೋವಿನ ಕುರಿತು ವರದಿಯಾಗಿಲ್ಲ. ಅಂದಹಾಗೆ ಮಣಿಪುರದ ಉಕ್ರುಲ್ ನಲ್ಲಿ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.