ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧಿಸಿದ ದಿಲ್ಲಿ ಪೊಲೀಸರು ನವದೆಹಲಿ,ಮೇ23, 2021 (..):ಕಿರಿಯ ಕುಸ್ತಿಪಟು ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಂಪಿಕ್ ಪದಕ ವಿಜೇತ ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ 23 ವರ್ಷದ ಸಾಗರ್ ರಾಣಾ ಹತ್ಯೆ ನಡೆದಿತ್ತು. ಸುಶೀಲ್ ಕುಮಾರ್ ವಿರುದ್ಧ ಆರೋಪ ಕೇಳಿಬಂದಿತ್ತು. ಬಳಿಕ ಸುಶೀಲ್ ತಲೆಮರೆಸಿಕೊಂಡಿದ್ದರು. ಇದೀಗ ಸುಶೀಲ್ ಕುಮಾರ್ ಹಾಗೂ ಅವರ ಖಾಸಗಿ ಕಾರ್ಯದರ್ಶಿ ಅಜಯ್ ಕುಮಾರ್ ಇಬ್ಬರನ್ನೂ ಬಂಧಿಸಿರುವುದಾಗಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. ಮಾಡೆಲ್ ಟೌನ್ ಪ್ರದೇಶದ ಮನೆಯಲ್ಲಿ ವಾಸವಾಗಿದ್ದ. ಜಾಗದ ವಿಚಾರವಾಗಿ ಮೇ 4ರಂದು ಸುಶೀಲ್ ಕುಮಾರ್ ಹಾಗೂ ಸಾಗರ್ ರಾಣಾ ಗುಂಪುಗಳ ನಡುವೆ ಗಲಾಟೆ ನಡೆದಿತ್ತು.