ಕೊಳ್ಳೇಗಾಲದ ಆಶ್ರಿತಾ ಈಗ ದೇಶದ ಮೊಟ್ಟ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್.. ಮೈಸೂರು, ಮೇ 22, 2021(..):ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಯುವತಿ ಆಶ್ರಿತಾ ವಿ ಒಲೆಟಿ ಈಗ ಭಾರತ ವಾಯು ದಳದ ಮೊಟ್ಟ ಮೊದಲ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಆಶ್ರಿತಾ ವಿ ಒಲೆಟಿ ಅವರು ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್ ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‌ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ. 1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀದರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಆಶ್ರಿತಾ ಒಲೆಟಿ ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಆಶ್ರಿತಾ ಕೊಳ್ಳೇಗಾಲದ ಒ.ವಿ. ವೆಂಕಟೇಶ್ ಬಾಬು ಹಾಗೂ ಒ.ವಿ. ವಾಣಿ ದಂಪತಿಯ ಹೆಮ್ಮೆಯ ಪುತ್ರಿಯಾಗಿದ್ದಾರೆ. : / / ’ / / …. , , . , , . , . 275 1973 . . ’ . . . . . . . , , . .