ಚಾಮರಾಜನಗರ ಆಕ್ಸಿಜನ್ ದುರಂತ: ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಬಿಡುಗಡೆ… ಬೆಂಗಳೂರು,ಮೇ,22,2021(..):ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿಂತೆ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ಪರಿಹಾರವನ್ನ ಬಿಡುಗಡೆ ಮಾಡಿದೆ. ಪರಿಹಾರಕ್ಕಾಗಿ ರಾಜ್ಯ ಸರ್ಕಾರ 48 ಲಕ್ಷ ರೂಪಾಯಿ ಹಣವನ್ನು ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ. ಮೇ 2ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದರು. ಈ ಕುರಿತು ತನಿಖೆ ನಡೆಸಿದ್ಧ ತಜ್ಞರ ಸಮಿತಿ ಘಟನೆಗೆ ಚಾಮರಾಜನಗರ ಡಿಸಿಯೇ ನೇರ ಹೊಣೆ ಎಂದು ಹೈಕೋರ್ಟ್ ಗೆ ವರದಿ ಸಲ್ಲಿಸಿತ್ತು. ಈ ಮಧ್ಯೆ ಮೃತರ ಕುಟುಂಬಗಳಿಗೆ ಸದ್ಯಕ್ಕೆ 2 ಲಕ್ಷ ರೂ ಪರಿಹಾರ ನೀಡುವುದಾಗಿ ಸರ್ಕಾರ ಹೈಕೋರ್ಟ್ ಗೆ ತಿಳಿಸಿತ್ತು. ಈ ವೇಳೆ ಹೈಕೋರ್ಟ್ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಳೆದ ಎರಡು ದಿನಗಳ ಹಿಂದೆ ಸರ್ಕಾರಕ್ಎಕ ಸೂಚನೆ ನೀಡಿತ್ತು. : -- - – – -