ಹಳ್ಳಿಗಳಲ್ಲಿ ಸೋಂಕು ತೀವ್ರಗೊಳ್ಳಲು ಸರ್ಕಾರದ ವೈಪಲ್ಯ ಕಾರಣ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ… ಬೆಂಗಳೂರು,ಮೇ,,21,2021(..):ರಾಜ್ಯದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಕೊರೋನಾ ಸೋಂಕು ತೀವ್ರಗೊಳ್ಳುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ವೈಪಲ್ಯ ಕಾರಣ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ವೈದ್ಯಕೀಯ ವ್ಯವಸ್ಥೆ ಸರಿ ಇಲ್ಲ. ಈ ಸರ್ಕಾರ ಸುಳ್ಳು ಹೇಳುವ ಕೆಲಸ ಮಾಡುತ್ತಿದೆ. ಸತ್ತವರ ಅಂಕಿ ಅಂಶದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಇದು ಜನದ್ರೋಹಿ ಸರ್ಕಾರ, ದುಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ನಾನು ಸರ್ಕಾರಕ್ಕೆ 12 ಪತ್ರಗಳನ್ನ ಬರೆದೆ ಆದರೆ ಇದಕ್ಕೆ ಒಂದೂ ಉತ್ತರ ಬರಲಿಲ್ಲ. ಹಾಗೆಯೇ ಕೇಂದ್ರದಲ್ಲೂ ಇದೇ ಪರಿಸ್ಥಿತಿ ಇದೆ. ಯಥಾ ರಾಜ , ತಥಾಪ್ರಜಾ ಎಂದು ಸಿದ್ದರಾಮಯ್ಯ ಹರಿಹಾಯ್ದರು. : – – -- -