ದೇಶದಲ್ಲಿ ಒಂದೇ ದಿನದಲ್ಲಿ 2.59 ಲಕ್ಷ ಮಂದಿಗೆ ಕೊರೋನಾ ಸೋಂಕು ಪತ್ತೆ… ನವದೆಹಲಿ,ಮೇ,21,2021(..):ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 2,59,591 ಕೊರೋನಾ ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,209 ಮಂದಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ 2,27,12,735 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 30,27,925 ಸಕ್ರಿಯ ಪ್ರಕರಣಗಳಿವೆ. : –- 2.59 - –