ಸಿಎಂ ಬಿಎಸ್ ವೈರಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ… ಮೈಸೂರು,ಮೇ,19,2021(..):ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮೇ 24ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಈ ನಡುವೆ ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ಸಹಕಾರ ಬ್ಯಾಂಕ್ ಗಳ ಸಾಲ ಮರುಪಾವತಿ ಅವಧಿ ವಿಸ್ತರಣೆ ಸ್ವಾಗತಾರ್ಹ. ಇಂದಿನ ಸಂಕಷ್ಟಕ್ಕೆ ಇದು ರೈತರಿಗೆ ಅಲ್ಪಮಟ್ಟದ ಸಹಾಯವಾಗಲಿದೆ. ಈ ಯೋಜನೆಯನ್ನ ಮತ್ತಷ್ಟು ವಿಸ್ತರಣೆ ಮಾಡಬೇಕು ಹಾಗೂ ಕೇಂದ್ರವೂ ಈ ನಿಟ್ಟಿನಲ್ಲಿ ಕ್ರಮವಹಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮರುಪಾವತಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಬೇಕು. ಬೆಳೆ ನಷ್ಟ ಪರಿಹಾರಕ್ಕೆ ಗರಿಷ್ಠ ಮಿತಿ ಕೈಬಿಟ್ಟು ಸಂಪೂರ್ಣ ಬೆಳೆಗೆ ಪರಿಹಾರ ನೀಡಿ ಎಂದು ಆಗ್ರಹಿಸಿದ್ದಾರೆ. ಹಾಗೆಯೇ ಅಸಂಘಟಿತ ಕಾರ್ಮಿಕರ ಪ್ಯಾಕೇಜ್ ನ್ನು ಮತ್ತಷ್ಟು ವಿಸ್ತರಣೆ ಮಾಡಿ. ಗ್ರಾಮೀಣ ಭಾಗದ ಜನರ ಬಳಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡ್ತಿವೆ‌. ಈ‌ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು ಎಂದು ಸರ್ಕಾರಕ್ಕೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಒತ್ತಾಯ ಮಾಡಿದ್ದಾರೆ. : - – - -