ರಾಜ್ಯಕ್ಕೆ 2 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಬಂದಿದೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್… ಬೆಂಗಳೂರು,ಮೇ,19,2021(..):ರಾಜ್ಯಕ್ಕೆ 2 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಸಚಿವ ಸುದಾಕರ್, 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದು ಅಗತ್ಯವಿದೆ. ಈಗಾಗಲೇ 2 ಲಕ್ಷ ಡೋಸ್ ಲಸಿಕೆ ಬಂದಿದೆ. ಮತ್ತೆ 2 ಕೋಟಿ ಡೋಸ್ ಗೆ ಆರ್ಡರ್ ಮಾಡಿದ್ದೇವೆ. ಮೊದಲ ಡೋಸ್ ನೀಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲೇ ಕೊವ್ಯಾಕ್ಸಿನ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಸ್ಪುಟ್ನಿಕ್ ಲಸಿಕೆ ಉತ್ಪಾದನೆಯನ್ನ ಮಾಡಲಾಗುತ್ತದೆ. ರಾಜ್ಯಕ್ಕೆ ಆದಷ್ಟು ಬೇಗ ಲಸಿಕೆ ಸಿಗುವ ವಿಶ್ವಾಸವಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. : – 2 - - - – . . .