ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದ-ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ… ಬೆಂಗಳೂರು ಮೇ18,2021(..): ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಗಾಗಿ ಒಂದು ವಸತಿ ಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳು ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ. ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆ, ಕೋವಿಡ್ ನಿಂದ ಬಾಧಿತರಾದ ಮಕ್ಕಳನ್ನು ಗುರುತಿಸಲು ಹಾಗೂ ಪುನರ್ವಸತಿಗೆ ಸರ್ಕಾರ 1098 ಎಂಬ ಸಹಾಯವಾಣಿ ತಂದಿದ್ದು, ಹಿರಿಯ ಐಎಎಸ್ ಅಧಿಕಾರಿ ಮೋಹನ್ ರಾಜ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಇಂಥ ಮಕ್ಕಳಿಗೆ ಕೌಟುಂಬಿಕ ವಾತಾವರಣ ಒದಗಿಸುವುದು ಸಚಿವೆಯಾಗಿ ನನ್ನ ಹಾಗೂ ನಮ್ಮ ಇಲಾಖೆ ಹಾಗೂ ನಮ್ಮ ಸರ್ಕಾರದ ಕರ್ತವ್ಯ ಎಂದರು. ತಂದೆ – ತಾಯಿ ಕೋವಿಡ್ ನಿಂದ ಮೃತರಾದರೆ, ತಂದೆ-ತಾಯಿ ಇಬ್ಬರು ಆಸ್ಪತ್ರೆಗೆ ದಾಖಲಾದರೆ, ಕೋವಿಡ್ ನಿಂದ ಒಬ್ಬರು ಮೃತರಾಗಿ ಇನ್ನೊಬ್ಬರು ಆಸ್ಪತ್ರೆಗೆ ದಾಖಲಾದರೆ, ಒಬ್ಬರು ಮೃತರಾಗಿ ಇನ್ನೊಬ್ಬರು ಬೇರೆ ಪ್ರದೇಶದಲ್ಲಿ ವಾಸವಿದ್ದರೆ. ಈ ಮೇಲಿನ ಕಾರಣಗಳಿಂದ ಮಕ್ಕಳು ಅನಾಥರಾದಾಗ ಅವರಿಗೆ ನಾವಿದ್ದೇವೆ ಎಂಬ ಭಾವನೆಯನ್ನು ಮೂಡಿಸಲು ಇಲಾಖೆ ಸಜ್ಜಾಗಿದೆ ಎಂದು ಹೇಳಿದರು. ಇನ್ನು ಸಚಿವೆ ಶಶಿಕಲಾ ಜೊಲ್ಲೆ ಅವರ ವಿಶೇಷ ಮುತುವರ್ಜಿ ಮೇರೆಗೆ ಕೋವಿಡ್ ಬಾಧಿತ ಅನಾಥ ಮಕ್ಕಳಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. * ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ವಿಶೇಷ ಯೋಜನೆ 2.ಲಕ್ಷಣವುಳ್ಳ ಕೋವಿಡ್ ಸೋಂಕಿತ ಮಕ್ಕಳಿಗೆ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಪಿಡಿಯಾಟ್ರಿಕ್ ಕೋವಿಡ್ ಕೇರ್ ಸೆಂಟರ್ ನಲ್ಲಿ ವಿಶೇಷ ಆರೈಕೆ. ಇಲಾಖೆಯಿಂದ ವಿಶೇಷ ಆರೈಕೆದಾರರ ನೇಮಕ * ಕೋವಿಡ್ ಸಂಧರ್ಭದಲ್ಲಿ ಇಲಾಖೆಯಿಂದ ಕೈಗೊಂಡ ಕ್ರಮಗಳು 2.ಅಂಗನವಾಡಿ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯದ ಮೇಲೆ ವಿಶೇಷ ನಿಗಾ : - – - - - - –-