ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕ ತನ್ವೀರ್ ಸೇಠ್ ಪತ್ರ: ಕಾರಣವೇನು ಗೊತ್ತೆ…?. ಮೈಸೂರು,ಮೇ,18,2021(..):ಮೈಸೂರಿನಲ್ಲಿ ಆಕ್ಸಿಜನ್ ಬಸ್ ಸೇವೆ ಆರಂಭಿಸಿ. ಅವಶ್ಯಕತೆ ಇರುವ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಬಸ್ ಸೇವೆ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗೆ ಪತ್ರ ಬರೆದು ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಿ. ವೈದ್ಯಕೀಯ ವಸ್ತುಗಳ ಖರೀದಿಗೆ ವಿನಾಯಿತಿ ನೀಡಬೇಕು. ಜತೆಗೆ ಔಷಧಿ, ಚುಚ್ಚುಮದ್ದು ಸಮರ್ಪಕ ಸರಬರಾಜಿಗೆ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್‌ ಬಗ್ಗೆ ಅರಿವು ಮೂಡಿಸಬೇಕು. ಆಶಾಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಈ ಕೆಲಸ ಮಾಡಲಿ. ಅಲ್ಲದೇ ಜಿಲ್ಲೆಯಲ್ಲಿ ತುರ್ತುವಾಹನಗಳ ಸಂಖ್ಯೆಯನ್ನ ಹೆಚ್ಚಿಸಬೇಕು. ತಜ್ಞರ ಸಮಿತಿ ರಚನೆ ಮಾಡಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಿ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. : –- – - - - -