ರಾಜ್ಯದ 17 ಜಿಲ್ಲೆಗಳ ಡಿಸಿಗಳ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್: ಸಭೆ ಬಳಿ ಮತ್ತಷ್ಟು ಕಠಿಣ ಕ್ರಮ- ಡಿಸಿಎಂ ಅಶ್ವಥ್ ನಾರಾಯಣ್… ಬೆಂಗಳೂರು,ಮೇ,18,2021(..):ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು ಸಭೆ ಬಳಿಕ 17 ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. ಈ ಬಗ್ಗೆ ಇಂದು ಮಾತನಾಡಿ ಮಾಹಿತಿ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್, ರಾಜ್ಯದ ಎಲ್ಲಾ ಡಿಸಿಗಳ ಬಳಿ ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ ಕುರಿತು ಮಾಹಿತಿ ಪಡೆದಿದ್ದೇವೆ. ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ಸಭೆ ಬಳಿಕ ಜಿಲ್ಲೆಗಳಲ್ಲಿ ಮತ್ತಷ್ಟು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಲಾಕ್ ಡೌನ್ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಿದ್ಧಾರೆ ಎಂದು ಮಾಹಿತಿ ನೀಡಿದರು. : - - – 17 - - - .