ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ… ಚಾಮರಾಜನಗರ,ಮೇ,17,2021(..):ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಎಲ್ಲಾ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ನಡುವೆ ಕೊರೋನಾ ನಿಯಂತ್ರಣದ ಬಳಿಕ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೊರೋನಾ ನಿಯಂತ್ರಣ ಬಳಿಕ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಮುಂಬೈನಗರದಲ್ಲೇ ಕೊರೋನಾ ಸೋಂಕು ಕಡಿಮೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ಕೊರೋನಾ ಕಡಿಮೆಯಾಗುವುದಿಲ್ಲವೇ..? ಎಂದರು. ಮೊದಲು ಕೋವಿಡ್ ನಿಯಂತ್ರಣದ ಬಗ್ಗೆ ಗಮನಹರಿಸೋಣ. ಕೋವಿಡ್ ನಿಯಂತ್ರಣದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಮಾಡೋಣ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು. , 2nd – , 17, 2021 (..): 2nd -19 . , 2nd . “ , …?” . .: / / / 2nd / : - - – – - .