ವಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್… ಬೆಂಗಳೂರು,ಮೇ,17,2021(..):ಕೊರೋನಾ ಲಸಿಕೆಯನ್ನ ವಿದೇಶಕ್ಕೆ ಕಳುಹಿಸಿದ ವಿಚಾರದಲ್ಲಿ ವಿಪಕ್ಷಗಳು ವಿನಾಕಾರಣ ರಾಜಕೀಯ ಮಾಡುತ್ತಿವೆ. ವಿಪಕ್ಷಗಳ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ ಸುಧಾಕರ್, ಕೊರೋನಾ 2ನೇ ಅಲೆ ತೀವ್ರತೆ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ವಿದೇಶಕ್ಕೆ ಉಚಿತವಾಗಿ ಲಸಿಕೆ ನೀಡಲಾಗಿತ್ತು. ಆದರೆ ಇದೇ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ. ವಿಪಕ್ಷಗಳ ಆರೋಪದಲ್ಲಿ ಯಾವುದೇ ಸತ್ಯವಿಲ್ಲ ಎಂದರು. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾತನಾಡಿದ ಸಚಿವ ಸುಧಾಕರ್, ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ಕರೆದಿದ್ದಾರೆ. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು. : – -- -. .