ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯಕ್ಕೆ 120 ಮೆಟ್ರಿಕ್ ಟನ್ ಆಕ್ಸಿಜನ್ ಆಗಮನ…. ಬೆಂಗಳೂರು,ಮೇ,15,2021(..):ರಾಜ್ಯದಲ್ಲಿ ಕೊರೊನಾ ಮಹಾಮಾರಿ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಅವಶ್ಯಕವಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಬೇರೆಡೆಯಿಂದ ಆಕ್ಸಿಜನ್ ಅನ್ನ ತರಿಸಿಕೊಳ್ಳಲಾಗುತ್ತಿದೆ. ಇನ್ನು ಇಂದು ಮುಂಜಾನೆ ರಾಜ್ಯಕ್ಕೆ 120 ಮೆಟ್ರಿಕ್ ಟನ್ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲಿನ ಮೂಲಕ ಕಳಿಂಗನಗರದಿಂದ ಬೆಂಗಳೂರಿಗೆ ತಲುಪಿದೆ. ಈ ಕುರಿತು ಸೌತ್ ವೆಸ್ಟರ್ನ್ ರೈಲ್ವೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಕರ್ನಾಟಕದ ಎರಡನೇ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಕಳಿಂಗನಗರದಿಂದ 120 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ಇಂದು ಬೆಳಗಿನ ಜಾವ ಬೆಂಗಳೂರಿಗೆ ತಲುಪಿದೆ. ಟಾಟಾನಗರದಿಂದ 120 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ಹೊರಟಿರುವ ಕರ್ನಾಟಕದ ಮೂರನೇ ಆಕ್ಸಿಜನ್ ರೈಲು ಇಂದು ಸಾಯಂಕಾಲ ಬೆಂಗಳೂರು ತಲುಪಲಿದೆ ಎಂದು ತಿಳಿಸಿದೆ. … 120 , 15, 2021 (..): . , . . , . . . 120 . 120 , , ’ .: 120 / / / / : 120 - - – –