ತೌಕ್ತೆ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ… ಬೆಂಗಳೂರು,ಮೇ,15,2021(..):ತೌಕ್ತೆ ಚಂಡಮಾರುತದ ಎಫೆಕ್ಟ್ ನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ಎನ್ ಆರ್ ಪುರ,ಕೊಪ್ಪ ಶೃಂಗೇರಿ ಸೇರಿ ಹಲವು ಕಡೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನರಿಗೆ ಎಚ್ಚರದಿಂದಿರಲು ಜಿಲ್ಲಾಡಳಿತ ಸೂಚನೆ ನೀಡಿದೆ. ಶಿವಮೊಗ್ಗ ಮೈಸೂರಿನಲ್ಲೂ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆಯಲ್ಲಿ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ಮಂಗಳೂರು ನಗರ ಭಾಗದಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ರಸ್ತೆಗಳೆಲ್ಲಾ ಜಲಾವೃತವಾಗಿವೆ. ಮಂಗಳೂರು ಕೊಟ್ಟಾರಚೌಕಿ, ಕೆ.ಎಸ್ ರಾವ್ ರೋಡ್, ಪಡೀಲ್, ಆನೆ ಗುಡ್ಡೆ ಮುಂತಾದ ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿದ್ದು, ವಾಹನ ಸಂಚಾರಕ್ಕೂ ಅಡ್ಡಿ ಉಂಟಾಗಿದೆ. ತೌಕ್ತೆ ಚಂಡಮಾರುತ ಪರಿಣಾಮ, ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಾಸನ, ಚಿಕ್ಕಮಗಳೂರು,ಉತ್ತರ ಕನ್ನಡ, ಉಡುಪಿ, ಕೊಡಗು ಸೇರಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. …. : , 15, 2021 (..): . , , , . , .. , , . - . . , . - . , .. , , , ., . . , , , , .: / / : - – -