ಮುಂದುವರೆದ ಕೊರೋನಾ ಅಬ್ಬರ: ದೇಶದಲ್ಲಿ ಒಂದೇ ದಿನ 3,26,098 ಕೋವಿಡ್ ಪ್ರಕರಣ ದಾಖಲು ನವದೆಹಲಿ,ಮೇ,15,2021(..):ದೇಶದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಈ ನಡುವೆ ಒಂದೇ ದಿನದಲ್ಲಿ 3,26,098 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 3,26,098 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,43,72,907 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 3,890 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ, ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2,66,207 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,53,299 ಕೊರೊನಾ ಸೊಂಕಿತರು ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಪೈಕಿ 2,04,32,898 ಕೊರೊನಾ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 36,73,802 ಸಕ್ರಿಯ ಪ್ರಕರಣಗಳಿವೆ. : 3,26,098 - - -