ಬಸವ ಜಯಂತಿ ದಿನದಂದೇ ಟೀಕಾಕಾರರಿಗೆ ವಚನದ ಮೂಲಕ ಟಾಂಗ್ ನೀಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ… ಮೈಸೂರು, ಮೇ,14,2021(..):‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ’ ಎಂಬ ಬಸವಣ್ಣನ ವಚನದ ಮೂಲಕ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಟೀಕಾಕಾರರಿಗೆ ಟಾಂಗ್ ನೀಡಿದ್ದಾರೆ. ಬಸವಜಯಂತಿ ಹಿನ್ನೆಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಮ್ಮ ಮೇಲಿನ ಆರೋಪ ಇಡೀ ಮೈಸೂರಿಗೆ ಕಳಂಕ ತಂದಿತ್ತು. ಮೈಸೂರಿಗೆ ಕಳಂಕ ತರುವ ಆರೋಪ ಮಾಡಿದವರು ಮೈಸೂರು ಜನರ ಕ್ಷಮೆ ಕೇಳಬೇಕು ಎಂದು ತಿಳಿಸಿದರು. ಹಾಗೆಯೇ ಟೀಕಾಕಾರರಿಗೆ ವಚನದ ಮೂಲಕ ಟಾಂಗ್ ನೀಡಿದ ಡಿಸಿ ರೋಹಿಣಿ ಸಿಂಧೂರಿ, ಮಾಜಿ ಕಾರ್ಪೋರೇಟರ್, ಶಾಸಕರ ಟೀಕೆಗಳಿಗೆ ಪ್ರತಿಕ್ರಿಯೆ ಕೇಳಬೇಡಿ. ಪ್ರತಿಯೊಂದಕ್ಕೂ ಉತ್ತರ ಕೊಡುತ್ತಾ ಕೂರುವ ಸಮಯವಲ್ಲ. ನಾನು ಮೈಸೂರಿಗೆ ಬಂದ ಏಳು ತಿಂಗಳಿಂದಲೂ ಪರ್ಸನಲ್ ಆರೋಪ ಮಾಡ್ತಿದ್ದಾರೆ. ದೇಶಸೇವೆಗಾಗಿ ನಾವು ಕೆಲಸಕ್ಕೆ ಸೇರಿದ್ದೇವೆ. ಇಂತಹ ಸಾಂಕ್ರಾಮಿಕ ಸಂದರ್ಭದಲ್ಲಿ ಎಲ್ಲರು ಕೈಜೋಡಿಸಿದಾಗ ಮಾತ್ರ ಜೀವ ರಕ್ಷಣೆ ಸಾಧ್ಯ. ಕಳಬೇಡ, ಕೊಲಬೇಡ ಎಂಬ ಬಸವಣ್ಣನ ವಚನ ಎಲ್ಲರೂ ಮಾರ್ಗಸೂಚಿಯಾಗಿ ಸ್ವೀಕರಿಸಬೇಕು. ನಾಡದೇವತೆ ಚಾಮುಂಡೇಶ್ವರಿ ಸ್ವಲ್ಪ ಕಷ್ಟ ಸಾಧ್ಯವಾದರೂ ಸದ್ಬುದ್ದಿ ಕೊಡಲಿ ಎಂದು ಹೇಳಿದರು. … , 14, 2021 (..): ’ . . , . .: / / / / ’ . : -- - --