ಲಸಿಕೆ ಪಡೆದಿದ್ದರೆ ಅಮೆರಿಕಾದಲ್ಲಿ ಮಾಸ್ಕ್ ಕಡ್ಡಾಯವಿಲ್ಲ: ಬೈಡೆನ್ ಘೋಷಣೆ ಬೆಂಗಳೂರು, ಮೇ 14, 2021 (..):ಲಸಿಕೆ ಪಡೆದವರು ಇನ್ಮುಂದೆ ಮಾಸ್ಕ್ ಧರಿಸಬೇಕಿಲ್ಲ ಎಂದು ಅಮೆರಿಕ ಅಧ್ಯಕ್ಷ ಬೈಡೆನ್ ಘೋಷಣೆ ಮಾಡಿದ್ದಾರೆ. ಕೊರೋನಾ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲವೆಂದು ಅಮೆರಿಕದ ರೋಗ ನಿಯಂತ್ರಣ ಸಂಸ್ಥೆ ಘೋಷಣೆ ಮಾಡಿದೆ. ಈ ಕುರಿತು ಅಧಿಕೃತ ಘೋಷಣೆಯನ್ನು ಅಮೆರಿಕಾ ಅಧ್ಯಕ್ಷರು ಮಾಡಿದ್ದಾರೆ. ಅಂದಹಾಗೆ ವಿಶ್ವದಾದ್ಯಂತ ಕೊರೊನಾ ಸೋಂಕು ವ್ಯಾಪಿಸಿದ್ದು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಜನಸಂದಣಿ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಕೊರೋನಾ ಗೆದ್ದ ಇಸ್ರೇಲ್ ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ.