ಕಾಳಸಂತೆಯಲ್ಲಿ ರೆಮ್ಡಿಸಿವರ್ ಔಷಧ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ… ಮೈಸೂರು,ಮೇ,13,2021(..):ಕಾಳಸಂತೆಯಲ್ಲಿ ರೆಮ್ಡಿಸಿವರ್ ಔಷಧ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡೇವಿಡ್ ಇನೋಸ್ ಮತ್ತು ಅಜಯ್ ಬಂಧಿತ ಆರೋಪಿಗಳು. ಬಂಧಿತರಿಂದ ಎರಡು ರೆಮ್ಡಿಸಿವರ್ ಇಂಜೆಕ್ಷನ್ ವಶಕ್ಕೆ ಪಡೆಯಲಾಗಿದೆ. ಕೆಆರ್ಎಸ್ ರಸ್ತೆಯ ಚಂದ್ರೋದಯ ಐ ಜನರಲ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಗಳಾಗಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೋವಿಡ್ ಸೋಂಕಿತರಿಗೆ ನೀಡಲು ವಿತರಿಸಿದ್ದ ಎರಡು ರೆಮ್ಡಿಸಿವರ್ ಇಂಜೆಕ್ಷನ್ ಗಳನ್ನು ಕದ್ದು ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಕಳೆದ ಕೆಲ ದಿನಗಳ ಹಿಂದಷ್ಟೇ ಇಂತಹದ್ದೆ ಪ್ರಕರಣವೊಂದನ್ನ ಸಿಸಿಬಿ ಪೊಲೀಸರು ಭೇದಿಸಿದ್ದರು. : –- –- -