ಕೊರೊನಾ ಟೆಸ್ಟಿಂಗ್ ಕಡಿಮೆ ಮತ್ತು ಕೋವಿಡ್ ಲಸಿಕೆ ಕೊರತೆ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದು ಹೀಗೆ… ಬೆಂಗಳೂರು,ಮೇ,12,2021(..):ರಾಜ್ಯದಲ್ಲಿ ಕೊರೋನಾ ಲಸಿಕೆಗೆ ಕೊರತೆ ಇಲ್ಲ. ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ಕೊಡುತ್ತೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಜತೆ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕೋವಿಡ್ ಟೆಸ್ಟ್ ಕಡಿಮೆ ಮಾಡಿರುವ ಕುರಿತು ಟೀಕೆಗಳು ಬರುತ್ತಿದೆ. ನಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಕೋವಿಡ್ ಟೆಸ್ಟ್ ಮಾಡಿದ್ದೇವೆ. ಇದರಿಂದ ಟೆಸ್ಟ್ ರಿಪೋರ್ಟ್ ಬರುವುದು ತಡವಾಗುತ್ತಿತ್ತು. ಹೀಗಾಗಿ ರಿಪೋರ್ಟ್ ಬೇಗ ಸಿಗುವಂತೆ ಮಾಡಲು ರೋಗ ಲಕ್ಷಣ ಇದ್ದವರಿಗೆ ಮಾತ್ರ ಟೆಸ್ಟ್ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು. ಕಡಿಮೆ ಟೆಸ್ಟ್ ಮಾಡಿದಾಗಲೇ ಹೆಚ್ಚು ಪಾಸಿಟಿವ್ ಕೇಸ್ ಬರುತ್ತದೆ. ಪಾಸಿಟಿವಿಟಿ ರೇಟ್ ಕಡಿಮೆ ತೋರಿಸಲು ಕಡಿಮೆ ಟೆಸ್ಟ್ ಮಾಡಲಾಗುತ್ತಿದೆ ಎಂಬುದು ಸುಳ್ಳು. ಸರ್ಕಾರ ಯಾವುದನ್ನೂ ಮುಚ್ಚಿಡುವ ಪ್ರಯತ್ನ ಮಾಡುತ್ತಿಲ್ಲ ಎಂದು ಅಶ್ವಥ್ ನಾರಾಯಣ್ ತಿಳಿಸಿದರು. …. , 12, 2021 (..): . . “ , . , ,” ., .: / / / / . : - - --