ಭೂಗತ ಪಾತಕಿ ಛೋಟಾ ರಾಜನ್ ಕೊರೋನಾಗೆ ಬಲಿ… ನವದೆಹಲಿ,ಮೇ,7,2021(..):ಭೂಗತ ಪಾತಕಿ ಛೋಟಾ ರಾಜನ್ ಕೊರೋನಾ ಸೋಂಕಿಗೆ ಬಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಛೋಟಾ ರಾಜನ್ ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ನನ್ನ ಏಪ್ರಿಲ್ 26ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. 2015ರಲ್ಲಿ ಇಂಡೋನೇಷ್ಯಾದಿಂದ ಬಂಧನಕ್ಕೊಳಗಾದ ನಂತರ ಆತನನ್ನ ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. : - –-.