ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…? ಬೆಂಗಳೂರು,ಮೇ,7,2021(..):ರಾಜ್ಯದಲ್ಲಿ ಜನತಾ ಕರ್ಫ್ಯೂ ಸರಿಯಾಗಿ ಜಾರಿಯಾಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೇ ಲಾಕ್ ಡೌನ್ ಅನಿವರ್ಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಜಕಿನ ಪ್ರಮಾಣ ಹೆಚ್ಚುತ್ತಿದ್ದು ಹೀಗಾಗಿ ಹಲವರು ರಾಜ್ಯ ಲಾಕ್ ಡೌನ್ ಮಾಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಕರ್ಫ್ಯೂ ಸರಿಯಾಗಿ ಜಾರಿಯಾಗುತ್ತಿಲ್ಲ. ಹೀಗಾಗಿ ಕಠಿಣ ಕ್ರಮ ಅನಿವಾರ್ಯ ಆಗಬಹುದು. ಇಂದು ಅಥವಾ ನಾಳೆ ಸಭೆ ನಡೆಸಿ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ಬೆಡ್ ಗಾಗಿ ನನ್ನ ಮನೆ ಬಳಿ ಬರಬೇಡಿ. ವಿಧಾನಸೌಧಕ್ಕು ಹೋಗಬೇಡಿ. ಅಧಿಕಾರಿಗಳ ಗಮನಕ್ಕೆ ತನ್ನಿ. ತುರ್ತು ಇರುವವರಿಗೆ ಬೆಡ್ ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. : -- - - – -