ದೇಶದಲ್ಲಿ ಒಂದೇ ದಿನ ಹೊಸದಾಗಿ 4,14,188 ಮಂದಿಗೆ ಕೊರೋನಾ ಸೋಂಕು ಪತ್ತೆ… ನವದೆಹಲಿ,ಮೇ7,2021(..): ದೇಶದಲ್ಲಿ ದಿನೇ ದಿನೇ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ ಹೊಸದಾಗಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 4,14,188 ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,915 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಗೆ ಬಲಿಯಾದವರ ಸಂಖ್ಯೆ 2,34,083ಕ್ಕೆ ಏರಿಕೆಯಾಗಿದೆ. ಇದುವರೆಗೆ 1,76,12,351 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿರುವಂತ ಒಟ್ಟು ಸಕ್ರೀಯ ಕೊರೋನಾ ಸೋಂಕಿತರ ಸಂಖ್ಯೆ 36,45,164 ಆಗಿದೆ. ಇದುವರೆದೆ 16,49,73,058 ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ. : 4,14,188 - - - - – .