ನನ್ನ 10 ವರ್ಷದ ಸೇವೆಯಲ್ಲಿ ಎಂದು ಈ ರೀತಿ ಕೆಲಸ ಮಾಡಿಲ್ಲ : ಗದ್ಗದಿತರಾದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…. ಮೈಸೂರು,ಮೇ,5,2021(..):ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗದ್ಗದಿತರಾದ ಘಟನೆ ನಡೆಯಿತು. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿದ ವಿಚಾರ ಕುರಿತು ಮಾತನಾಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ. ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ. ಇದ್ರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ. ಸತ್ತವರ ಮನೆಯಲ್ಲಿ ನೋವಿರುತ್ತದೆ. ಈ ವೇಳೆ ಈ ರೀತಿ ಆರೋಪ ಮಾಡಬಾರದು. ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ. ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದು ಹೇಳಿದರು. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಚಾಮರಾಜನಗರಕ್ಕೆ ಕಷ್ಟದ ವೇಳೆ ಸ್ಪಂದಿಸಿಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು. ಅವರ ಕಷ್ಟ ಕಾಲದಲ್ಲಿ ರಿಸ್ಕ್ ತೆಗೆದುಕೊಂಡು ಆಕ್ಸಿಜನ್ ಕಳುಹಿಸಿದ್ದೇವೆ. ನಾವು ಆಸ್ಪತ್ರೆಯಲ್ಲಿದ್ದ 40 ಸಿಲಿಂಡರ್ ಕಳುಹಿಸಿದ್ದೇವೆ. ಎಲ್ಲೂ ಸಹ ಆಸ್ಪತ್ರೆಯಿಂದ ಕಳುಹಿಸಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಇದು ಮಾನವೀಯತೆ ಅಲ್ವಾ ? ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿ ಅವರಿಗೆ ರೋಹಿಣಿ ಸಿಂಧೂರಿ ಪ್ರಶ್ನೆ ಮಾಡಿದರು. ಆಕ್ಸಿಜನ್ ಅನ್ನ ಮೊದಲೇ ಕೇಳಿದ್ದರೆ ಮೊದಲೇ ಕಳುಹಿಸುತ್ತಿದ್ದೆವು. ಅವರು ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24/7ಕೆಲಸ ಮಾಡುತ್ತಿದ್ದೇವೆ. ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ‌ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಭಾವುಕರಾಗಿ ಸ್ಪಷ್ಟನೆ ನೀಡಿದರು. … “ 10 : , 5, 2021 (..): . 24 , . “ . 10 , . . ’ . 40 . . ?!,” .. .“ ’ , . . . . 24/7 . ,” , .: / .. / / 24 / / : - - ---