ಚಾಮರಾಜನಗರ ಡಿಸಿ ಆರೋಪಕ್ಕೆ ತಿರುಗೇಟು: ಆಕ್ಸಿಜನ್ ಸರಬರಾಜು ಕುರಿತು ಸ್ಪಷ್ಟನೆ ನೀಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ… ಮೈಸೂರು,ಮೇ,5,2021(..):ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಡಿಸಿ ಎಂ.ಆರ್ ರವಿ ಅವರ ಮಾಡಿರುವ ಆರೋಪಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಆಕ್ಸಿಜನ್ ಸಪ್ಲೈ ವಿಚಾರದಲ್ಲಿ ಚಾಮರಾಜನಗರ ಡಿಸಿ ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ಆರೋಪ ಮಾಡಿದ್ದಾರೆ. ಮೈಸೂರು ಡಿಸಿಯಾಗಿರುವ ನಾನು ಚಾಮರಾಜನಗರಕ್ಕಾಗಲಿ ಅಥವ ಇನ್ಯಾವುದೆ ಜಿಲ್ಲೆಗೆ ಆಕ್ಸಿಜನ್ ಸರಬರಾಜು ತಡೆದಿಲ್ಲ. ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿನ ಸರಬರಾಜುದಾರರು ಹಾಗೂ ಜಿಲ್ಲಾಡಳಿತ ನಡುವಿನ ಸಂವಹನ ಇರುತ್ತೆ. ಈಗ ಮೈಸೂರಿಗೆ ಬಳ್ಳಾರಿಯಿಂದ ಕಡಿಮೆ ಆಕ್ಸಿಜನ್ ಸಪ್ಲೈ ಆದರೆ ನಾನು ಬಳ್ಳಾರಿ ಡಿಸಿಯನ್ನ ದೂಷಿಸಲು ಸಾಧ್ಯವಿಲ್ಲ. ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳೋದು ಅವರದ್ದೇ ಜವಬ್ದಾರಿ. ಅದು ಆಗದಿದ್ದರೆ ಮೇಲಾಧಿಕಾರಿಗಳಿಗೆ ಹೇಳಬೇಕು. ಅದರಲ್ಲಿ ವಿಫಲವಾಗಿರುವ ಚಾಮರಾಜನಗರದವರು ಈಗ ಮೈಸೂರಿನ ಮೇಲೆ ದೂಷಿಸುತ್ತಿದ್ದಾರೆ. ರಾಜ್ಯ ಸರ್ಕಾರ ಆದೇಶಿಸಿರುವ ವಿಚಾರಣೆಯಲ್ಲಿ ಇದೇಲ್ಲವು ಸಾಬೀತಾಗಲಿದೆ ಎಂದು ಚಾಮರಾಜನಗರ ಡಿಸಿ ಎಂ.ಆರ್.ರವಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. 4 ಅಂಶಗಳನ್ನ ಉಲ್ಲೇಖಿಸಿ ಡಿಸಿ ರೋಹಿಣಿ ಸಿಂಧೂರಿ ಅವರುಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಜೊತೆಗೆ ಮೇ 2 ಮತ್ತು 3 ರಂದು ಚಾಮರಾಜನಗರಕ್ಕೆ ಕಳುಹಿಸಿದ ಆಕ್ಸಿಜನ್ ದಾಖಲೆ, ಸಮಯ ಹಾಗೂ ಬಿಲ್ ಸಂಖ್ಯೆಯ ಜೊತೆಗೆ ಮಾಹಿತಿ ಬಹಿರಂಗ ಪಡಿಸಿ ಸ್ಪಷ್ಟನೆ ನೀಡಿದ್ದಾರೆ. … , 5, 2021 (..): .. ’ . , .. . . , . . , . . ’ / . . ,” . , 2 3, .: / / / : - - - - --