ಮೈಸೂರಿನಲ್ಲಿ 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆ ಉದ್ಘಾಟನೆ… ಮೈಸೂರು,ಮೇ,3,2021(..):ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆ, 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯನ್ನ ತೆರೆಯಲಾಗಿದೆ. ನಗರದ ಜಯಲಕ್ಷ್ಮಿ ಪುರಂನಲ್ಲಿರುವ ಅಂತರ್ರಾಷ್ಟ್ರೀಯ ಯೂತ್ ಹಾಸ್ಟೆಲ್ ಅನ್ನು ಕೋವಿಡ್-19 ಆಸ್ಪತ್ರೆಯಾಗಿ ಮಾರ್ಪಡು ಮಾಡಲಾಗಿದ್ದು, ಬೃಂದಾವನ ಆಸ್ಪತ್ರೆಯಿಂದ ಕೋವಿಡ್ ಕೇರ್ ಸೆಂಟರ್ ಆಗಿ ನಿರ್ಮಾಣ ಮಾಡಲಾಗಿದೆ. ಈ 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯನ್ನ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು. ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿ ಮತ್ತಿತರರು ಉಪಸ್ಥಿತರಿದ್ದರು. : -64 - -