ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್: ಸಹಾಯವಾಣಿಗೆ 30ಕ್ಕೂ ಹೆಚ್ಚು ಕರೆ ಹಾಸನ, ಮೇ 24,2024 (..):ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ದೂರು ನೀಡಲು ಎಸ್​ಐಟಿ () ಆರಂಭಿಸಿದ್ದ ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ ಎಂಬ ಮಾಹಿತಿ ತಿಳಿದು ಬಂದಿದೆ. ಆದರೆ ಸಹಾಯವಾಣಿಗೆ ಕರೆ ಮಾಡಿರುವ ಸಂತ್ರಸ್ತ ಮಹಿಳೆಯರು ಇದುವರೆಗೂ ದೂರು ನೀಡಿಲ್ಲ. ಹೀಗಾಗಿ ಹೆಲ್ಪ್‌ಲೈನ್ ಸಂಪರ್ಕಿಸಿ ಮಾಹಿತಿ ನೀಡುವಂತೆ ಮತ್ತೊಮ್ಮೆ ಎಸ್​ಐಟಿ ಮನವಿ ಮಾಡಿದೆ ಎನ್ನಲಾಗಿದೆ. 6360938947 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ದೂರು ನೀಡಲು ಎಸ್​​​​ಐಟಿ ಮನವಿ ಮಾಡಿದೆ. ದೂರು ನೀಡಿದರೆ ಮಾಹಿತಿ ಸಂಗ್ರಹಿಸಲು ಸಿದ್ದರಿದ್ದೇವೆ. ಗುರುತು, ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್​ಐಟಿ ಭರವಸೆ ನೀಡಿದೆ. : , , 30 , ,