ಚಾಮರಾಜನಗರಕ್ಕೆ 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ- ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ…. ಮೈಸೂರು, ಮೇ,3,2021(..):ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದೆ ಇದ್ದುದ್ದರಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ನಿನ್ನೆ ರಾತ್ರಿ 12.30 ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು‌ 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿ ಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು ಅದನ್ನು ಸರಿಯಾದ ಸಮಯದಲ್ಲಿ ಬಂದಿದ್ದೇಯಾ ಇಲ್ಲವೋ ಗೊತ್ತಿಲ್ಲ. ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ. ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತ ವಾಗಿ 250 ಆಕ್ಸಿಜನ್ ಸಿಲಿಂಡರ್ ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿರೋದು ದಾಖಲೆಯಲ್ಲಿದೆ. ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜನಗರಕ್ಕೆ ನಿನ್ನೆ ಮಧ್ಯರಾತ್ರಿಯೆ ರವಾನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ. …. 250 , 3, 2021 (..): - 23 , . , 250 12.30 . , . , , . . . 210 , 40 .: / 250 / / / : 250 –- –-- - .