ಮಸ್ಕಿಯಲ್ಲಿ ಮುದುಡಿದ ತಾವರೆ: ಕಾಂಗ್ರೆಸ್ ಅಭ್ಯರ್ಥಿ ಮೇಲು ‘ಕೈ’ ರಾಯಚೂರು,ಮೇ,2,2021(..):ಭಾರಿ ಕುತೂಹಲ ಮೂಡಿಸಿರುವ ರಾಯಚೂರಿನ ಮಸ್ಕಿ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳಗೆ ಗೆಲುವು ಬಹುತೇಕ ಖಚಿತವಾಗಿದೆ. ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಈ ಮೂಲಕ ಗೆಲುವು ಖಚಿತವಾಗಿದ್ದು ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಪ್ರತಾಪ್ ಗೌಡ ಪಾಟೀಲ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿ ನಂತರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ನಡುವೆ ಬಸನಗೌಡ ತುರುವಿಹಾಳ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು. : – -- .