ನವದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ… ನವದೆಹಲಿ,ಮೇ,1,2021(..):ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಈ ಮಧ್ಯೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ. ಈ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ನವದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಾಗಿ ಮತ್ತೊಂದು ವಾರ್ ಲಾಕ್ ಡೌನ್ ವಿಸ್ತರಣೆ ಮಾಡಿ ಅರವಿಂದ ಕೇಜ್ರಿವಾಲ್ ಆದೇಶಿಸಿದ್ದಾರೆ. ಮೇ10ರವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ ಎನ್ನಲಾಗಿದೆ. ಕಳೆದ ಮೂರು ವಾರಗಳಿಂದ ಕೋವಿಡ್ -19 ಪ್ರಕರಣಗಳಲ್ಲಿ ಏರಿಕೆಯ ಮಧ್ಯೆ ಕೇಜ್ರಿವಾಲ್ ಲಾಕ್‌ಡೌನ್‌ಗೆ ಆಶ್ರಯಿಸಿದ್ದಾರೆ. : –- - – .