18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್ ವೈ ಸಾಂಕೇತಿಕ ಚಾಲನೆ… ಬೆಂಗಳೂರು,ಮೇ,1,2021(..):ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಿದರು. ಬೆಂಗಳೂರಿನ ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ನೀಡುವ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, 3.56 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶವಿದೆ. 45 ವರ್ಷ ಮೇಲ್ಟಟ್ಟವರಿಗೆ ಕೋವಿಡ್ ಲಸಿಕೆ ನೀಡುತ್ತಿದ್ದೇವೆ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರು ನೋಂದಣಿ ಮಾಡಿಸಿಕೊಂಡು, ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದರು. 1 ಲಕ್ಷ ಲಸಿಕೆ ಸಂಗ್ರಹ ನಮ್ಮಲ್ಲಿಯೇ ಇದ್ದು ರಾಜ್ಯಕ್ಕೆ 3 ಲಕ್ಷ ಲಸಿಕೆ ಬಂದಿದ್ದು, ಒಟ್ಟು 4 ಲಕ್ಷ ಲಸಿಕೆ ಸಂಗ್ರಹವಿದ್ದು, ಖಾಲಿಯಾಗುವವರೆಗೆ ಲಸಿಕೆ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. … 18 , 1, 2021 (..): .. 18 . , . 3.56 . 45 . . , . . , .“ 4 - , 3 ,” .: / / / 4 / / .. / / 18 : - - – - – 18 .