18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನಕ್ಕೆ ಸಿಎಂ ಬಿಎಸ್ ವೈ ಚಾಲನೆ ಕುರಿತು ಸಿದ್ಧರಾಮಯ್ಯ ಟೀಕೆ… ಬೆಂಗಳೂರು,ಮೇ,1,2021(..):18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಈ ಕುರಿತು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಇದು ಕೇವಲ ಫೋಟೊಗಾಗಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ಮೇ ಅಂತ್ಯದವರೆಗೆ ಲಸಿಕೆ ಸಿಗುವುದಿಲ್ಲ. ಪ್ರಧಾನಿ ಮೋದಿ ಲಸಿಕೆ ನೀಡುವ ಭರವಸೆ ಕೊಟ್ಟಿದ್ದಾರೆ. ಆದರೆ ಯಾವುದೇ ಪೂರ್ವ ತಯಾರಿ ಇಲ್ಲದೆ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಯಾವ ತಯಾರಿ ಮಾಡಿಕೊಂಡಿದೆ ಎಂದು ಪ್ರಶ್ನಿಸಿದರು. ಹಾಗೆಯೇ ಪೋಲಿಯೋ ಮಾದರಿಯಲ್ಲಿ ಲಸಿಕೆ ನೀಡಬೇಕು ಎಂದು ಆಗ್ರಹಿಸಿದರು. ಉಮೇಶ್ ಜಾಧವ್ ಗೆ ಮೂಟೆ ಮೂಟೆ ಲಸಿಕೆ ಕೊಡ್ತಾರೆ. ಆದರೆ ಪ್ರಿಯಾಂಕ್ ಖರ್ಗೆ ಕೇಳಿದರೇ ಕೊಡುವುದಿಲ್ಲ. ರಾಜ್ಯದಲ್ಲಿ ಅರಾಜಕತೆ ಇದೆ. ಆಡಳಿತ ಅಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. : -- - - -