ದೇಶದಲ್ಲಿ ಒಂದೇ ದಿನ 4 ಲಕ್ಷದ ಗಡಿ ದಾಟಿದ ಕೋವಿಡ್ ಕೇಸ್… ನವದೆಹಲಿ,ಮೇ,1,2021(..):ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿದ್ದು ಜನರಲ್ಲಿ ಆತಂಕ ಸೃಷ್ಠಿಸಿದೆ. ಈ ನಡುವೆ ದೇಶದಲ್ಲಿ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 4,01,993 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,91,64,969 ಕ್ಕೆ ಏರಿಕೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಲ್ಲಿ 3,523 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,11,853 ಕ್ಕೆ ಏರಿಕೆಯಾಗಿದೆ. ಹಾಗೆಯೇ ಒಂದೇ ದಿನ 2,97,698 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 32 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. … 4 24 ! 1, 2021 (..): 4 24 .4,01,993 1,91,64,969 . 3,523 2,11,853.2,97,698 . 32 .: -19 / 4 !/ 24 : - -4 - – – .