ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್’ಗೆ ಬರ್ತ್ ಡೇ ಸಂಭ್ರಮ ಬೆಂಗಳೂರು, ಏಪ್ರಿಲ್ 30, 2021 (..): ಭಾರತದ ಕ್ರಿಕೆಟ್ ತಂಡದ ಹಿಟ್ ಮ್ಯಾನ್ ರೋಹಿತ್ ಶರ್ಮಾ’ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ರೋಹಿತ್ ಶರ್ಮಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಸಾವಿರಾರು ಅಭಿಮಾನಿಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಿದ್ದಾರೆ. ಹಿಟ್ ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಅತ್ಯುತ್ತಮ ನಾಯಕರಾಗಿದ್ದಾರೆ. ಅಂದಹಾಗೆ ರೋಹಿತ್ ಶರ್ಮಾ 2007ರಂದು ಐರ್ಲೆಂಡ್ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.