ಮೇ 2ರಂದು ಮೆರವಣಿಗೆ ಮತ್ತು ವಿಜಯೋತ್ಸವ ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ… ನವದೆಹಲಿ,ಏಪ್ರಿಲ್,27,2021(..):ಮೇ 2 ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು ಈ ಹಿನ್ನೆಲೆಯಲ್ಲಿ ಅಂದು ಮೆರವಣಿಗೆ ಮತ್ತು ವಿಜಯೋತ್ಸವವನ್ನು ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಸಲಾಗಿದ್ದು ಮೇ 2ರಂದು ಫಲಿತಾಂಶ ಹೊರ ಬೀಳಲಿದೆ. ಹಾಗೆಯೇ ಕರ್ನಾಟಕದ ಬೀದರ್ ನ ಬಸವಕಲ್ಯಾಣ, ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 17 ರಂದು ಮತದಾನ ನಡೆದಿದ್ದು ಮೇ 2ರಂದು ಫಲಿತಾಂಶ ಹೊರಬೀಳಲಿದೆ. ಈ ನಡುವೆ ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೇ 2ರ ಚುನಾವಣಾ ಫಲಿತಾಂಶದಂದು ಮೆರವಣಿಗೆ ವಿಜಯೋತ್ಸವ ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. : 2- - – -