ರಾಜ್ಯಾದ್ಯಂತ 12 ಸಾವಿರ ಬಸ್ ಸಂಚಾರ: ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ- ಡಿಸಿಎಂ ಲಕ್ಷ್ಮಣ್ ಸವದಿ… ಬೆಂಗಳೂರು,ಏಪ್ರಿಲ್,27,2021(..):ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂವನ್ನ ಸರ್ಕಾರ ಘೋಷಣೆ ಮಾಡಿದೆ. ಹೀಗಾಗಿ ಬೆಂಗಳೂರು, ಮೈಸೂರು ಸೇರಿ ಪ್ರಮುಖ ನಗರಗಳಿಂದ ಜನರು ತಮ್ಮ ತಮ್ಮಊರುಗಳತ್ತ ತೆರಳುತ್ತಿದ್ದಾರೆ. ಹೀಗಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ರಾಜ್ಯದಲ್ಲಿ 12 ಸಾವಿರ ಬಸ್ ಸಂಚಾರವಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಕೊರೋನಾ ನಿಯಮ ಪಾಲಿಸಲಾಗುತ್ತಿದೆ ಎಂದು ಹೇಳಿದ್ದಾರೆ. : 12 - - – -- .