ದೇಶದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುಂತೆ ‘ಕೈ’ ನಾಯಕ ರಾಹುಲ್ ಗಾಂಧಿ ಆಗ್ರಹ… ನವದೆಹಲಿ,ಏಪ್ರಿಲ್,26,2021(..):ದೇಶದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ಅಟ್ಟಹಾಸ ಮೆರೆಯುತ್ತಿದ್ದು ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕಠಿಣ ಕ್ರಮಗಳನ್ನ ಕೈಗೊಳ್ಳಲಾಗಿದೆ. ಕೊರೋನಾ ತಡೆಗಾಗಿ ದೇಶದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಈ ನಡುವೆ ದೇಶದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ, ಈಗಾಗಲೇ ಬಹಳಷ್ಟು ಚರ್ಚೆಯಾಗಿದೆ. ಈಗ ಚರ್ಚೆ ಬೇಡ. ದೇಶದ ಎಲ್ಲರಿಗೂ ಕೊರೋನಾ ಲಸಿಕೆ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. : - –- -