ದೇಶದಲ್ಲಿ ಸತತ 5ನೇ ದಿನವೂ 3 ಲಕ್ಷದ ಗಡಿ ದಾಟಿದ ಕೋವಿಡ್ ಕೇಸ್… ನವದೆಹಲಿ,ಏಪ್ರಿಲ್,26,2021(..):ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಸತತ 5ನೇ ದಿನವೂ ಕೋವಿಡ್ ಕೇಸ್ 3 ಲಕ್ಷದ ಗಡಿ ದಾಟಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,52,991 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 2812 ಮಂದಿ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,95,123ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 28,13,658 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 1,43,04,382 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2,19,272 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 14,02,367 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 14,19,11,223 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. …. 3 5th , . 26, 2021 (..): . 3 5th . , . 3,52,991 24 1,73,13,163. , 2812 1,95,123. 28,13,658 1,43,04,382. 2,19,272 24 . 14,02,367 14,19,11,223 .: -19 / / 3 / 24 : - - - 3 –