ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನ ಬೆಂಗಳೂರು, ಏಪ್ರಿಲ್ 25, 2021 (..):ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಕರ್ನಾಟಕ ಮೂಲದ ಸುಪ್ರೀಂಕೋರ್ಟ್‌ ನ್ಯಾಯಾಧೀಶ ನ್ಯಾ.ಮೋಹನಗೌಡರ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರ ತಾಲೂಕು ಚಿಕ್ಕೇರೂರಿನವರಾದ ಅವರು 3 ದಿನ ಹಿಂದೆ ಅನಾರೋಗ್ಯದಿಂದ ಹರ್ಯಾಣದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕ್ಯಾನ್ಸರ್‌ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು ಎಂದು ಸುಪ್ರೀಂಕೋರ್ಟ್‌ನ ಸಹಾಯಕ ರಿಜಿಸ್ಟ್ರಾರ್‌ ಗಗನ್‌ ಸೋನಿ ತಿಳಿಸಿದ್ದಾರೆ.