ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಿಎಸ್ ರವಿಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ… ಬೆಂಗಳೂರು,ಏಪ್ರಿಲ್,24,2021(..):ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಸಿದರೇ ಒಳಿತು. ವಾರದ ದಿನಗಳಲ್ಲೂ ವೀಕೆಂಡ್ ಕರ್ಫ್ಯೂ ಮುಂದುವರೆದರೆ ಒಳ್ಳೆಯದು ಎಂದು ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಅಭಿಪ್ರಾಯ ಬಂದಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ. ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ರಾಜ್ಯ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಸಿದರೇ ಒಳಿತೆಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಆದರೆ ಯಾವುದು ಉತ್ತಮ ಎಂದು ಸರ್ಕಾರ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. ಇನ್ನು ಎಲ್ಲವನ್ನು ಸರ್ಕಾರವೇ ಮಾಡುತ್ತದೆ ಎಂದು ಜನರು ತಿಳಿಯಬಾರದು. ಜನರಿಗೂ ಕೂಡ ಜವಾಬ್ಸಾರಿ ಅನ್ನೋದು ಇದೆ. ಹೀಗಾಗಿ ಅನಗತ್ಯವಾಗಿ ಹೊರಗಡೆ ಓಡಾಡಬಾರದು. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಕೊರೋನಾ ಸೋಂಕು ಪೀಕ್ ಗೆ ಬಂದಿದೆ. ಪ್ರಕರಣ ಕಡಿಮೆಯಾಗಬಹುದೆಂಬ ನಂಬಿಕೆ ಇದೆ ಎಂದು ಮುಖ್ಯಕಾರ್ಯದರ್ಶಿ ರವಿ ಕುಮಾರ್ ತಿಳಿಸಿದರು. ಹಾಗೆಯೇ ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು. ಅದ್ದರಿಂದ ಸಂಪೂರ್ಣ ಲಾಕ್ ಡೌನ್ ಮಾಡಲು ಆಗುವುದಿಲ್ಲ ಎಂದು ಸಿಎಸ್ ರವಿಕುಮಾರ್ ಸ್ಪಷ್ಟನೆ ನೀಡಿದರು. : - – - -.