ಮಾನವೀಯ ನೆಲೆ ಗಟ್ಟಿನ ಮೇಲೆ ರೋಗಿಗಳಿಗೆ ಚಿಕಿತ್ಸೆ ಒದಗಿಸಲು ವೈದ್ಯರಿಗೆ ಸಚಿವೆ ಶಶಿಕಲಾ ಜೊಲ್ಲೆ ಸಲಹೆ.. ವಿಜಯಪುರ,ಏಪ್ರಿಲ್,23,2021(..):ಕೊರೋನಾ ಮಹಾಮಾರಿಯ ಎರಡನೇ ಅಲೆಯಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ನಾವಿದ್ದು, ಜನತೆಗಾಗಿ ಅಮೂಲ್ಯ ಸೇವೆ ಕಲ್ಪಿಸುವಂತೆ ಮಹಿಳಾ‌ ಮತ್ತು ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ ವೈದ್ಯರಿಗೆ ಸಲಹೆ ನೀಡಿದ್ದಾರೆ. ವಿಜಯಪುರದ ನೂತನ ಪ್ರವಾಸಿ ಮಂದಿರದಲ್ಲಿಂದು ಸರ್ಕಾರಿ ಹಾಗೂ ಖಾಸಗಿ ವೈದ್ಯರೊಂದಿಗೆ ಸಭೆ ನಡೆಸಿ ಅವಶ್ಯಕತೆಗಳ ಬಗ್ಗೆ ಪರಿಶೀಲನೆ ನಡೆಸಿದ ಸಚಿವೆ ಶಶಿಕಲಾ ಜೊಲ್ಲೆ, ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಅವಶ್ಯಕತೆಗೆ ತಕ್ಕಂತೆ ಸೇವೆ ಕಲ್ಪಿಸಬೇಕು ಎಂದು ಹೇಳಿದರು. ಇದೇ ವೇಳೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅವರ ಸಮಸ್ಯೆಗಳನ್ನು ನಿವಾರಿಸಬೇಕು. ಆಕ್ಸಿಜನ್, ಬೆಡ್‍ಗಳ ಕೊರತೆಯಾಗದಂತೆ ನಿಗಾವಹಿಸಬೇಕು. ತುರ್ತು ಚಿಕಿತ್ಸೆಗೆ ತಕ್ಷಣ ಸ್ಪಂದಿಸುವಂತೆ ಸಲಹೆ ನೀಡಿದರು. ಅದೇ ರೀತಿ ನಗರದ ಗಾಂಧೀಚೌಕ್ ಬಳಿ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ -19 ಲಸಿಕೆ ನೀಡುವ ಕಾರ್ಕ್ರಮಕ್ಕೆ ಚಾಲನೆ‌ ನೀಡಿದ ಸಚಿವೆ ಶಶಿಕಲಾ ಜೊಲ್ಲೆ, ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳಿರುವುದಿಲ್ಲ, ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಬೇಡಿ ಎಂದು ಕರೆ‌ ನೀಡಿದರು. ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ದೇಶೀಯ ಲಸಿಕೆಗಳಾಗಿರೋದ್ರಿಂದ ಎಲ್ಲರೂ ಅಭಿಮಾನ ಪಡುವಂತಹ ವಿಷಯವಾಗಿದ್ದು, ಯಾವುದೇ ವದಂತಿಗಳ ಕಡೆಗೆ ಗಮನ ಹರಿಸದೇ ನಿಮ್ಮ ಸುರಕ್ಷತೆಗಾಗಿ ಲಸಿಕೆ‌ ಪಡೆಯಿರಿ ಅಂತ ಸಲಹೆ ನೀಡಿದರು. … , . 23, 2021 (..): -19 . . , .“ .” . -19 - , . .“ . , ’ ,” .: -19 / / / : - - - – - –