ಮಣಿಪಾಲ್ ಆಸ್ಪತ್ರೆಯಿಂದ ಸಿಎಂ ಬಿ.ಎಸ್ ಯಡಿಯೂರಪ್ಪ ಡಿಸ್ಚಾರ್ಜ್… ಬೆಂಗಳೂರು,ಏಪ್ರಿಲ್,22,2021(..):ಕೊರೋನಾ ಸೋಂಕು ತಗುಲಿದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಏಪ್ರಿಲ್ 16 ರಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು. ನಂತರ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಸಿಎಂ ಬಿಎಸ್ ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ದೈಹಿಕ ಅಂತರ ಕಾಪಾಡಿ. ನಮಗೆ ಬೇರೆ ದಾರಿ ಇಲ್ಲ. ಯಾರೂ ಸಹ ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇದಕ್ಕೆ ಜನರು ಸಹಕಾರ ನೀಡಬೇಕು. ಕೋವಿಡ್ ನಿಯಂತ್ರಣ ಸಂಬಂಧ ಸಂಜೆ 4 ಗಂಟೆಗೆ ಸಭೆ ಇದೆ ಎಂದರು. … , . 22, 2021 (..): .. , . 16 . . . . . “ . . . . 4 ,” .: / .. / / / 4 : - - – …