ಕೋವಿಡ್ ನಿಯಂತ್ರಣಕ್ಕೆ ಕ್ರಮ: ಮೈಸೂರಿನಲ್ಲಿ 144 ಸೆಕ್ಷನ್ ಜಾರಿ… ಮೈಸೂರು,ಏಪ್ರಿಲ್,22,2021(..):ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಪ್ರಮಾಣವನ್ನ ತಗ್ಗಿಸಲು ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಿಕೇಂಡ್ ಕರ್ಫ್ಯೂನಂತಹ ಕ್ರಮ ಕೈಗೊಂಡಿದೆ. ಈ ನಡುವೆ ಕೋವಿಡ್ ನಿಯಂತ್ರಣಕ್ಕೆ ಮೈಸೂರು ಜಿಲ್ಲೆಯಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಹೌದು ಕೊರೋನಾ ಹಿನ್ನೆಲೆ ಮೇ 4 ವರೆಗೆ 144 ಸೆಕ್ಷನ್ ಜಾರಿಗೊಳಿಸಿ ಮೈಸೂರು ನಗರ ಪೋಲಿಸ್ ಆಯುಕ್ತ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ನಿನ್ನೆ ರಾತ್ರಿಯಿಂದಲೆ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಮೇ 4 ರ ಬೆಳಗ್ಗೆ 6 ವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಸಾರ್ವಜನಿಕವಾಗಿ 5 ಕ್ಕಿಂತ ಹೆಚ್ಚು ಜನ ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದ್ದು, ದಿನ‌ನಿತ್ಯದ ವಸ್ತುಗಳೂ ಸೇರಿದಂತೆ ವ್ಯಾಪಾರಿ ಸ್ಥಳಗಳಲ್ಲಿ ನಿಯಮ ಉಲ್ಲಂಘನೆ ಮಾಡಬಾರದು. ನಿಯಮ ಉಲ್ಲಂಘನೆ ಆದ್ರೆ ಅಂಗಡಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ. ನಿಯಮ ಉಲ್ಲಂಘಿಸಿದರೇ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೋಲೀಸರು ಕೇಸು ದಾಖಲಿಸಲಿದ್ದಾರೆ. : - –- 144 – -