ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ… ನವದೆಹಲಿ,ಏಪ್ರಿಲ್,20,2021(..):ದೇಶಾದ್ಯಂತ ಕೊರೋನಾ 2ನೇ ಅಲೆಯ ಅಬ್ಬರ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಮೇ 2ರಿಂದ ಮೇ.17ರವರೆಗೆ ನಿಗದಿಯಾಗಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡಿದ್ದಾರೆ. ಮೇ 2ರಿಂದ ಆರಂಭಗೊಂಡು, ಮೇ.17ಕ್ಕೆ ಮುಕ್ತಾಯಗೊಳ್ಳಬೇಕಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಕೊರೋನಾ ಸೋಂಕಿನ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದೆ. ಈ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸಿಬಿಎಸ್​ಇ ಪರೀಕ್ಷೆಗಳ ಬಗ್ಗೆ ನಿರ್ಧಾರ ಕೈಗೊಂಡ ನಂತರ ನೆಟ್ ಪರೀಕ್ಷೆಗಳನ್ನು ಮುಂದೂಡುವ ಎರಡನೇ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. : –- –- .