ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ದು ಮಾಡಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶ… ಮೈಸೂರು,ಏಪ್ರಿಲ್,21,2021(..):ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಟ್ಟಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಕೋವಿಡ್ ಕೆಲಸಕ್ಕೆ ನಿಯೋಜನೆ ಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಲಾಗಿದ್ದು ರಜೆ ಬೇಕಾದರೇ ಕಾರಣ ನೀಡಿ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಕೋವಿಡ್ ತಡೆಗಾಗಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. : - - - - - - --